ಬೆಂಗಳೂರು:
ಭಾರತ್ ಬಂದ್ಗೆ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಪ್ರತಿಭಟನಾಕಾರರು ನಸುಕಿನಲ್ಲೇ ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.ಇದರ ಮಧ್ಯೆ ಬಿಎಂಟಿಸಿ ಬಸ್ಗೆ ಕಿಡಿಗೇಡಿಗಳಿಂದ ಕಲ್ಲು ಎಸೆದಿರುವ ಘಟನೆ ನಡೆದಿದೆ. ಮಲ್ಲೇಶ್ವರಂ ಎಂಟನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದ್ದು, ಪೀಣ್ಯದಿಂದ ಮೆಜೆಸ್ಟಿಕ್ ಮಾರ್ಗದಲ್ಲಿ ಬರುತ್ತಿದ್ದ ಬಸ್ ನಂಬರ್ 252 ನಂಬರಿನ ಬಸ್ ಮೇಲೆ ಕಲ್ಲು ಎಸೆಯಲಾಗಿದೆ.
ಇನ್ನು ಭಾರತ್ ಬಂದ್ ಹಿನ್ನಲೆಯಲ್ಲಿ ನಗರದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಯಶವಂತಪುರ ಮಾರುಕಟ್ಟೆ ಖಾಲಿ ಖಾಲಿ ಹೊಡೆಯುತ್ತಿದೆ. ರೈಲ್ವೇ ನಿಲ್ದಾಣದಲ್ಲಿ ಆಟೋಗಳ ಸಂಚಾರ ಮಾತ್ರ ಕಂಡು ಬರುತ್ತಿದೆ……