ಬೆಂಗಳೂರು;
ಬಿಜೆಪಿ ನಿರೀಕ್ಷೆಯಂತೆ 14 ತಿಂಗಳ ರಾಜ್ಯದ ಮೈತ್ರಿ ಸರ್ಕಾರ ಕೊನೆಗೂ ಪತನವಾಗಿದೆ. ಇಂದು ರಾಜ್ಯಪಾಲರನ್ನು ಭೇಟಿ ಮಾಡಲಿರುವ ಬಿಎಸ್ವೈ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ಬಿಎಸ್ವೈ ಅವರು ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಅಧೀಕೃತವಾಗಿ ಫಿಕ್ಸ್ ಆಗಲಿದೆ. ಈಗಾಗಲೇ ಬಿಎಸ್ವೈ ಆಪ್ತ ಶಾಸ್ತ್ರಿಗಳಿಂದ ಪ್ರಮಾಣ ವಚನಕ್ಕೆ ದಿನಾಂಕ ಮತ್ತು ಸಮಯ ನಿಗದಿಯಾಗಿದ್ದು, ಇದಕ್ಕೆ ಇನ್ನೂ ಯಡಿಯೂರಪ್ಪ ಅನುಮತಿಯೊಂದು ಬಾಕಿ ಇದೆ ಎಂದು ಹೇಳಲಾಗುತ್ತಿದೆ.
ಶಾಸಕಾಂಗ ಪಕ್ಷದ ಸಭೆಯ ನಂತರ ಬಿಎಸ್ವೈ ದೆಹಲಿಗೆ ಹೊರಡಲಿದ್ದು, ಅಮಿತ್ ಷಾ, ಪಿಯೂಷ್ ಗೋಯೆಲ್, ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ ಹಾಗೂ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಲಿದ್ದಾರೆ. ಅಲ್ಲದೆ ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಬಹುತೇಕ ಖಚಿತವಾಗಿದ್ದು ಶುಕ್ರವಾರ ಸಂಜೆ 4ಕ್ಕೆ ಮುಹೂರ್ತವನ್ನೂ ಫಿಕ್ಸ್ ಮಾಡಲಾಗಿದೆ……