Breaking News

ಅಮಿತಾಬ್ ಬಚ್ಚನ್​ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!

ಕೇಂದ್ರ ಸರ್ಕಾರದಿಂದ ಬಿಗ್ ಬಿಗೆ ಅತ್ಯುನ್ನತ ಗೌರವ ....

SHARE......LIKE......COMMENT......

ಬಾಲಿವುಡ್‌:

ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಾಲಿವುಡ್ ಬಿಗ್ ಬಿ, ನಟ ಅಮಿತಾಬ್ ಬಚ್ಚನ್​ಗೆ ಲಭಿಸಿದೆ. ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಬಿಗ್ ಬಿಗೆ ಅತ್ಯುನ್ನತ ಗೌರವ ನೀಡಿದೆ. ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಅಮಿತಾಬ್ ಈ ಪ್ರಶಸ್ತಿಗೆ ಭಾಜನರಾಗಿದ್ದು, ಹಲವರು ಶುಭಾಶಯ ಕೋರಿದ್ದಾರೆ. ಭಾರತೀಯ ಸಿನಿರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಲ್ಲಿ ಭಾರತ ಸರ್ಕಾರ 1969ರಿಂದ ಈ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಯು ಸ್ವರ್ಣ ಕಮಲ ಪದಕ ಹಾಗೂ 10 ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ……