Breaking News

ಬಿಜೆಪಿ ಭದ್ರಕೋಟೆ ಕೈ ವಶವಾಗುತ್ತಾ..?

ತೀವ್ರ ಕುತೂಹಲ ಕೆರಳಿಸಿರುವ ಜಾಲಹಳ್ಳಿ ಜಿಪಂ ಕ್ಷೇತ್ರ....

SHARE......LIKE......COMMENT......

ಜಾಲಹಳ್ಳಿ:

ಜಾಲಹಳ್ಳಿ ಜಿಪಂ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಗುರುರಾಜರಾವ್‌ ದೇಸಾಯಿ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಅ.28ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ-ಕಾಂಗ್ರೆಸ್‌ ಮತ್ತು ಪಕ್ಷೇತರ ಸೇರಿ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿಯಿಂದ ವೀರಣ್ಣ ಪಾಣಿ, ಕಾಂಗ್ರೆಸ್‌ನಿಂದ ವಿಠೊಬ ನಾಯಕ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ನರಸಣ್ಣ ನಾಯಕ ಕಣದಲ್ಲಿದ್ದು, ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಡಿಸಿದೆ. ಬಿಜೆಪಿ ಭದ್ರಕೋಟೆಯೆಂದೇ ಬಿಂಬಿತವಾಗಿರುವ ಜಾಲಹಳ್ಳಿ ಜಿಪಂ ಕ್ಷೇತ್ರವನ್ನು ಕಾಂಗ್ರೆಸ್‌ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಎಂಬ ಕುತೂಹಲ ಕ್ಷೇತ್ರದ ಮತದಾರರಲ್ಲಿ ಮೂಡಿದೆ.

ತೀವ್ರ ಕುತೂಹಲ ಕೆರಳಿಸಿರುವ ಜಾಲಹಳ್ಳಿ ಜಿಪಂ ಕ್ಷೇತ್ರ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಎರಡೂ ಪಕ್ಷಗಳ ಪ್ರಚಾರದ ಕಾವು ತೀವ್ರಗೊಂಡಿದೆ. ತನ್ನ ಭದ್ರಕೋಟೆಯಾದ ಜಾಲಹಳ್ಳಿ ಜಿಪಂ ಕ್ಷೇತ್ರವನ್ನು ಶತಗತಾಯವಾಗಿ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡಿದರೆ. ಕಾಂಗ್ರೆಸ್‌ ವಶಕ್ಕೆ ಪಡೆದುಕೊಳ್ಳಲು ಪ್ರಯತ್ನಿಸುತ್ತಿದೆ.

ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು ಶುಕ್ರವಾರ ಬಹಿರಂಗ ಪ್ರಚಾರ ಮುಕ್ತಾಯ ಆಗಲಿದೆ. ಹೀಗಾಗಿ ಎರಡು ರಾಷ್ಟ್ರೀಯ ಪಕ್ಷಗಳು ಕೊನೆ ಹಂತದ ಬಿರುಸಿನ ಪ್ರಚಾರ ಕೈಗೊಂಡಿವೆ. ಜಿದ್ದಾಜಿದ್ದಿ ಆಗಿರುವ ಈ ಉಪ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು ಗೆಲುವಿಗಾಗಿ ತೀವ್ರ ಕಸರತ್ತು ನಡೆಸಿದ್ದು ಮತದಾರರ ಮನವೊಲಿಸುತ್ತಿದ್ದಾರೆ. ಆದರೆ ಮತದಾರ ಯಾರಿಗೆ ಮಣೆ ಹಾಕುತ್ತಾನೆ ಎನ್ನುವುದು ನಿಗೂಡವಾಗಿದೆ….