ಬೆಂಗಳೂರು:
ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ವಿಜಯನಗರ ಫುಡ್ಸ್ಟ್ರೀಟ್ ಬಳಿ ನಡೆದಿರೋ ಈ ಹತ್ಯೆಯ ಲೈವ್ ದೃಶ್ಯಗಳು ಸಿಕ್ಕಿವೆ. ಕೊಲೆ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ವಿನಯ್ ಎಂಬಾತ ಮಹದೇವ್ ಎಂಬುವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ವಿನಯ್ ಕಾಮಾಕ್ಷಿಪಾಳ್ಯ ನಿವಾಸಿಯಾಗಿದ್ದು, ಎಂಕಾಂ ವ್ಯಾಸಂಗ ಮಾಡುತ್ತಿದ್ದಾನೆ. ಜನರ ಎದುರೇ ದುಷ್ಕರ್ಮಿಮಿಗಳು ಹತ್ಯೆ ಮಾಡಿದ್ದಾರೆ. ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.