ಬೆಂಗಳೂರು:
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧಿಸಲಿದ್ದಾರೆ ಎಂಬುದು ಸುಳ್ಳು. ಆ ರೀತಿಯ ಯಾವುದೇ ಮಾಹಿತಿ ಇಲ್ಲ. ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ವವೈ ಹೇಳಿದ್ದಾರೆ.
ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ 28 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಆದರೆ 21 ಕ್ಷೇತ್ರಗಳ ಪಟ್ಟಿಯನ್ನು ಪ್ರಟಿಸಿದ್ದಾರೆ. ಉಳಿದ ಅಭ್ಯರ್ಥಿಗಳ ಪಟ್ಟಿ ಇಂದು ಅಥವಾ ನಾಳೆ ಪ್ರಕಟವಾಗಬಹುದು ಎಂದರು ಹಾಗೂ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಭಿನ್ನಾಭಿಪ್ರಾಯ ಇರುವುದರಿಂದ ಆ ಕ್ಷೇತ್ರಗಳ ನಾಯಕರುಗಳನ್ನು ಕರೆದು ಮಾತುಕತೆ ನಡೆಸಿ ಬಗೆಹರಿಸುತ್ತೇವೆ ಎಂದರು.
ಇನ್ನು ಪ್ರಧಾನಿ ಮೋದಿ ಬೆಂಗಳೂರು ಅಥವಾ ರಾಜ್ಯದ ಇತರೆಡೆಗಳಿಂದ ನರೇಂದ್ರ ಮೋದಿ ಸ್ಪರ್ಧಿಸುವುದಿಲ್ಲ, ಅಂತಹಾ ಯಾವ ಆಲೋಚನೆಯೂ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.