ನವದೆಹಲಿ:
ಬೆಳಕಿನ ಹಬ್ಬ ದೀಪಾವಳಿಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಟಾಕಿ ಪ್ರಿಯರಿಗೆ ಇಂದು ಶಾಕ್ ಎದುರಾಗಲಿದೆ. ದೇಶದಾದ್ಯಂತ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರುವ ಕುರಿತು ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ. ಈ ಕುರಿತು ನ್ಯಾಯಮೂರ್ತಿಗಳಾದ ಎಕೆ ಸಿಕ್ರಿ ಮತ್ತು ಅಶೋಕ್ ಭೂಷಣ್ ನೇತೃತ್ವದ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ. ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗುತ್ತದೆ ಅನ್ನೋ ಕಾರಣಕ್ಕೆ ದೇಶಾದ್ಯಂತ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರಬೇಕೆಂದು ಅರ್ಜಿ ಸಲ್ಲಿಕೆಯಾಗಿತ್ತು. ಆಗಸ್ಟ್ 28ರಂದು ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು……..