ಮಂಡ್ಯ:
ತಾಲೂಕಿನ ಹಳೇ ಬೂದನೂರು ಬಳಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬೆಂಗಳೂರಿನ ಬನಶಂಕರಿ ಮೂಲದ ದೀಪು ಎಂಬವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಂಗಳೂರು ಮೂಲದ ಜಯರಾಮ್, ಕುಮಾರ್, ಮಂಜುನಾಥ್, ಸುರೇಶ್, ಮಾನ್ಸಿ ಜಾರ್ಜ್ ಎಂದು ಗುರುತಿಸಲಾಗಿದೆ.
ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು, ಮೈಸೂರು ಕಡೆಗೆ ಹೊರಟಿದ್ದ ಕಾರುಗಳಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಮಂಡ್ಯದ ಮಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ…….
ಮತ್ತೊಂದು ಪ್ರಕರಣದಲ್ಲಿ ಮಳವಳ್ಳಿ ತಾಲೂಕಿನ ಕಾಗೇಪುರ ಬಳಿ ಬೈಕ್ ಸವಾರ ರಸ್ತೆ ಬದಿಯ ಕಂಬಕ್ಕೆ ಗುದ್ದಿ ಸಾವಿಗೀಡಾದ ಘಟನೆ ನಡೆದಿದೆ.ಮಳವಳ್ಳಿ ತಾಲೂಕಿನ ರಾಗಿ ಬೊಮ್ಮನಹಳ್ಳಿಯ ಮಹದೇವಪ್ಪ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಕಾರ್ಯ ನಿಮಿತ್ತ ಗ್ರಾಮದಿಂದ ಬರುತ್ತಿದ್ದಾಗ ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ…….