ಮಂಡ್ಯ:
ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಇಂದು ನಾಮಪತ್ರ ಸಲ್ಲಿಸಿದ್ದಾರೆ , ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ. ಬಳಿಕ ಬೆಳಗ್ಗೆ 11 ಗಂಟೆಗೆ ನೇರವಾಗಿ ಮಂಡ್ಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು ನಂತರ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಿಲ್ವರ್ ಜುಬಿಲಿ ಪಾರ್ಕ್ ಆಗಮಿಸಿ, ಬೃಹತ್ ಬಹಿರಂಗ ಸಭೆ ನಡೆಸುವ ಮೂಲಕ ಅಧಿಕೃತ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು.
ಮೆರವಣಿಗೆ ಹಾಗೂ ಪ್ರಚಾರ ಸಭೆಯಲ್ಲಿ ಚಿತ್ರನಟರಾದ ದರ್ಶನ್, ಯಶ್ , ರಾಕ್ ಲೈನ್ ವೆಂಕಟೇಶ್ , ದೊಡ್ಡಣ್ಣ, ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು, ರಾಜಕೀಯ ಮುಖಂಡರು ಅಭಿಮಾನಿಗಳು ಭಾಗವಹಿಸಿದರು. ಇನ್ನು ಸುಮಲತಾ ನಾಮಿನೇಷನ್ ವೇಳೆ ಕಾಂಗ್ರೆಸ್ ಬಾವುಟಗಳ ಆರ್ಭಟ ಜೋರಾಗಿದ್ದು ಜೆಡಿಎಸ್ಗೆ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಕೈಕೊಟ್ಟಿದ್ದಾರೆ……