ಮಂಡ್ಯ:
ಹಾಡಹಗಲೇ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ ಪ್ರಕರಣ ಮುಂಜಾಗ್ರತಾ ಕ್ರಮವಾಗಿ ಮದ್ದೂರು ಪಟ್ಟಣ, ಸಾರ್ವಜನಿಕ ಆಸ್ಪತ್ರೆ ಹಾಗೂ ತೊಪ್ಪನಹಳ್ಳಿ ಗ್ರಾಮಕ್ಕೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಮೃತ ಗ್ರಾಮಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡುವ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕದಡದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ತಡರಾತ್ರಿ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ ಖಂಡಿಸಿ ತೊಪ್ಪನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಕಾಂಗ್ರೆಸ್ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದ ಉಪಕರಣಗಳನ್ನ ಧ್ವಂಸಗೊಳಿಸಿದ್ದಾರೆ. ಅಲ್ದೆ ಮನೆಗಳ ಮುಂದೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಗಲಾಟೆ ತಹಬದಿಗೆ ತರಲು ಪೊಲೀಸ್ರು ಲಾಠಿ ಪ್ರಹಾರ ನಡೆಸಿದ್ದು, ಲಾಠಿಚಾರ್ಜ್ನಲ್ಲಿ ಮಹಿಳೆ ಜಯಮ್ಮಳ ಕಾಲು ಮುರಿದಿದೆ.ಸ್ಥಳಕ್ಕೆ ಮೈಸೂರು ದಕ್ಷಿಣ ವಲಯದ ಐಜಿಪಿ ಶರತ್ ಚಂದ್ರ ಭೇಟಿ ನೀಡಿ ಗ್ರಾಮಸ್ಥರಿಗೆ ಶಾಂತಿ, ಸುವ್ಯವಸ್ಥೆ ಕಾಪಾಡಿ ಎಂದು ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದಾರೆ……….
ಯೆಸ್ ನೆನ್ನೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಪ್ರಕಾಶ್ರನ್ನ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಕೊಲೆಯ ನಂತ್ರ ಕಾರಿನಲ್ಲಿ ದುಷ್ಕರ್ಮಿಗಳ ತಂಡ ಪರಾರಿಯಾಗಿದೆ. 2016 ರಲ್ಲಿ ತೊಪ್ಪನಹಳ್ಳಿ ಯಲ್ಲಿ ಮೂವರ ಕೊಲೆಯಾಗಿತ್ತು. ಅಂದಿನ ಕೊಲೆ ಪ್ರತೀಕಾರವಾಗಿ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ…..