ಬೆಂಗಳೂರು:
ಗಾಲಿ ಜರ್ನಾದನ ರೆಡ್ಡಿಗೆ ಮತ್ತೊಂದು ಸಂಕಷ್ಟ …SITಯಿಂದ ಚಾರ್ಜ್ ಶೀಟ್ ಸಲ್ಲಿಕೆ…ಯೆಸ್ ಅಕ್ರಮ ಗಣಿಗಾರಿಕೆ ನಡೆಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರೆಡ್ಡಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.
ಚಾರ್ಜ್ ಶೀಟ್ ನಲ್ಲಿ ಜನಾರ್ದನ ರೆಡ್ಡಿ A1 ಆರೋಪಿಯಾಗಿ, ಅಲಿಖಾನ್ A2 ಹಾಗೂ ಶ್ರೀನಿವಾಸ್ ರೆಡ್ಡಿ A3 ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ. ಆದರೆ ಖಾರದಪುಡಿ ಮಹೇಶ್ ಸೇರಿದಂತೆ ಹಲವರ ಹೆಸರು ಆರೋಪಪಟ್ಟಿಯಲ್ಲಿ ಕೈಬಿಡಲಾಗಿದೆ ಎಂದು ವರದಿ ವಿವರಿಸಿದೆ.
ಶೇಖ್ ಸಾಬ್ ಗಣಿ ಕಂಪನಿ ಗುತ್ತಿಗೆ ಪಡೆದು ಅಕ್ರಮ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್ ಐಟಿ ತನಿಖಾ ತಂಡ ತನಿಖೆ ನಡೆಸಿತ್ತು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿರುವ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ವರದಿ ತಿಳಿಸಿದೆ…..