Breaking News

ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ನಿಧನ….

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು......

SHARE......LIKE......COMMENT......

ಮಂಗಳೂರು:

ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರು ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು, ಕೆಲ ತಿಂಗಳುಗಳಿಂದ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಧನಂಜಯ್ ಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 1.30ಕ್ಕೆ ನಿಧನರಾದರು.

ನಾಳೆ ಬೆಳಗ್ಗೆ ‌7 ಗಂಟೆಯಿಂದ ‌10 ಗಂಟೆಯವರೆಗೆ ನಗರದ ಕದ್ರಿ‌ ಕಂಬಳದಲ್ಲಿರುವ ಅವರ ನಿವಾಸದಲ್ಲಿ ‌ಸಾರ್ವಜನಿಕರಿಗೆ‌ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿ. ಧನಂಜಯ ಕುಮಾರ್ ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಧನಂಜಯ ಕುಮಾರ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದ ಧನಂಜಯ್ ಕುಮಾರ್ ಬಿ ಎಸ್ ವೈ ಕೆಜಿಪಿ ಆರಂಭಿಸಿದಾಗ ಅವರ ಜೊತೆ ಹೆಜ್ಜೆ ಹಾಕಿದ್ದರು. 2016 ರಲ್ಲಿ ಧನಂಜಯ್ ಕುಮಾರ್ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು……