ಚಿಕ್ಕಬಳ್ಳಾಪುರ :
ಕ್ಯಾನ್ಸರ್ನಿಂದ ಬಳಲುತ್ತಿದ್ದ ಯುವತಿಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ನಗರದ ಶಾಂತಿನಗರದ ರಾಜಣ್ಣ ಮತ್ತು ಭಾಗ್ಯಮ್ಮ ದಂಪತಿಯ ಪುತ್ರಿ ಸುಷ್ಮಾ (20) ಮೃತ ಯುವತಿ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಸೋಮವಾರ ಬೆಳಗ್ಗೆ ಯಾರೂ ಇಲ್ಲದ ವೇಳೆ ಮನೆಯ ಮೇಲ್ಛಾವಣಿಯ ಕಬ್ಬಿಣದ ಕೊಂಡಿಗೆ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಎರಡು ವರ್ಷಗಳಿಂದ ಕ್ಯಾನ್ಸರ್ನಿಂದ ನರಳುತ್ತಿದ್ದ ಯುವತಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಳು. ಕ್ಯಾನ್ಸರ್ ಇರುವುದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಯುವತಿಯ ತಂದೆ ರಾಜಣ್ಣ ನೀಡಿರುವ ಹೇಳಿಕೆ ಮೇರೆಗೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ……