Breaking News

ಹಾಸನಾಂಬೆ ದರ್ಶನೋತ್ಸಕ್ಕೆ ಮೂಲಸೌಕರ್ಯ ಒದಗಿಸಲು ಆದ್ಯತೆ

ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ...

SHARE......LIKE......COMMENT......
ಹಾಸನ:
ಪ್ರತಿ ವರ್ಷದಂತೆ ಈ ಬಾರಿಯೂ ಹಾಸನಾಂಬ ದೇವಿ ದರ್ಶನೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿಸಲು ಎಲ್ಲ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯ ಅಧಕ್ಷತೆ ವಹಿಸಿ ಮಾತನಾಡಿದರು.
ಭಕ್ತಾದಿಗಳಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು. ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ ಸಮರ್ಪಕವಾಗಿರಬೇಕು. ವಿಶೇಷ ದರ್ಶನ, ಅಂಗವಿಕಲರು ಮತ್ತು ವೃದ್ಧರಿಗೆ ಪ್ರತ್ಯೇಕ ಸಾಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಈ ಬಾರಿ ಕಡಿಮೆ ದಿನಗಳ ಸಮಯಾವಕಾಶ ಇರುವುದರಿಂದ ಪ್ರತಿದಿನ ಹೆಚ್ಚಿನ ವೇಳೆ ದರ್ಶನಕ್ಕೆ ಅವಕಾಶವಾಗುವಂತಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಆರೋಗ್ಯ ಇಲಾಖೆಯ ಸೇವೆಯನ್ನು ಸಮರ್ಪಕವಾಗಿ ಒಳಸಿಕೊಳ್ಳಬೇಕು. ಪ್ರತಿದಿನ ಸಂಜೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಮನ ಹರಿಸಬೇಕು. ಅದೇ ರೀತಿ ಪ್ರವಾಸಿಗರಿಗೆ ನಿಗದಿತ ದಿನದಲ್ಲಿ ಹಾಸನ ಜಿಲ್ಲಾ ದರ್ಶನಕ್ಕೆ ವಾಹನ ವ್ಯವಸ್ಥೆಗೆ ಪ್ರವಾಸೋದ್ಯಮ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು  ಸೂಚಿಸಿದರು.
ಹೆಲಿ ಟೂರಿಸಂ ಕೂಡ ಈ ಬಾರಿಯ ಆಕರ್ಷಣೆಯಾಗಲಿದ್ದು, ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಎಲ್ಲ ಇಲಾಖಾ ಅಧಿಕಾರಿಗಳು ಹಾಸನಾಂಬ ಜಾತ್ರೆ ಯಶಸ್ಸಿಗೆ ಶ್ರಮಿಸಬೇಕು. ಅಲ್ಲದೆ ನಗರದ ಜನರ ಸಹಕಾರ ಬೇಕು. ಅದೇ ರೀತಿ ನಗರಸಭೆ ವತಿಯಿಂದ ಸ್ವಚ್ಛತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು……