ಮೈಸೂರು:
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ. ನಗರದ ಜೆ.ಕೆ.ಮೈದಾನದಲ್ಲಿ ಆಯೋಜಿಸಿರುವ ರೈತ ದಸರಾ ಉದ್ಘಾಟಿಸಿ ಮಾತನಾಡಿದ ಪ್ರವಾಸೋದ್ಯಮ ಮತ್ತು ರೇಷೆಸಚಿವ ಸಾ.ರಾ.ಮಹೇಶ್, ರೈತರ 49 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಿಂದ ರೈತ ದಸರಾ ಮೆರವಣಿಗೆ ನಡೆಯಿತು.
ಇದೇ ವೇಳೆ, ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿದ್ದ ಚಿಗುರು ಕವಿಗೋಷ್ಠಿಯನ್ನು ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಉದ್ಘಾಟಿಸಿದರು. ನಗರದ ಶಾರದಾ ವಿಲಾಸ ಶತಮಾನೋತ್ಸವ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮಕ್ಕಳ ದಸರಾ ಸಮಾರಂಭ ಆಯೋಜಿಸಲಾಗಿತ್ತು. ಮಕ್ಕಳ ದಸರಾ ಕಾರ್ಯಕ್ರಮ ಒಂದೆಡೆ ಮಕ್ಕಳ ಪ್ರತಿಭೆ ಅನಾವರಣಗೊಳಿಸಿದರೆ, ಮತ್ತೂಂದೆಡೆ ವಿದ್ಯಾರ್ಥಿಗಳ ಜ್ಞಾನಾರ್ಜನೆಗೂ ಸಾಕ್ಷಿಯಾಯಿತು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಸ್ತುಪ್ರದರ್ಶನದಲ್ಲಿ ಮಕ್ಕಳು ತಾವೇ ತಯಾರಿಸಿದ ವಿವಿಧ ವಸ್ತುಗಳನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು……