ಬೆಂಗಳೂರು:
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಟ ಯಶ್ ಆಡಿಟರ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ಪತ್ತೆ ಹಚ್ಚಿ ಕೊಂಡೊಯ್ದಿದ್ದಾರೆ.
ಬಸವರಾಜ್ ಚಿತ್ರರಂಗದ ಹಲವು ನಟ ಮತ್ತು ನಿರ್ವಪಕರಿಗೆ ಆಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಶ್ ಮನೆಯಲ್ಲಿ ಜಪ್ತಿ ಮಾಡಿದ್ದ ಕೆಲ ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳು, ಇದಕ್ಕೆ ಸಂಬಂಧಿಸಿದ ಇನ್ನಷ್ಟು ದಾಖಲೆಗಳನ್ನು ಕಲೆ ಹಾಕಲು ಬಸವರಾಜ್ ಕಚೇರಿಗೆ ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ನಟ, ನಿರ್ವಪಕರು 109 ಕೋಟಿ ರೂ. ಅಘೋಷಿತ ಆಸ್ತಿ ಹೊಂದಿರುವುದನ್ನು ಐಟಿ ಅಧಿಕಾರಿಗಳು ಈಗಾಗಲೇ ಪತ್ತೆಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ದಾಖಲೆಗಳಿಗಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಗೊಳಗಾದ ನಟ, ನಿರ್ವಪಕರಿಂದ ಹೇಳಿಕೆ ಪಡೆಯಲು ಐಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆ ನಟರಾದ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್, ನಿರ್ವಪಕರಾದ ಮನೋಹರ್, ರಾಕ್ಲೈನ್ ವೆಂಕಟೇಶ್ ಈಗಾಗಲೇ ಐಟಿ ಕಚೇರಿಗೆ ಹಾಜರಾಗಿದ್ದಾರೆ. ಯಶ್, ಸುದೀಪ್ ಹಾಜರಾಗಬೇಕಿದೆ……