Breaking News

ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ..!

14 ಕ್ಷೇತ್ರಗಳ ಮತದಾನಕ್ಕೆ 24 ಗಂಟೆ ಮಾತ್ರ ಬಾಕಿ....

SHARE......LIKE......COMMENT......

ಉತ್ತರ ಕರ್ನಾಟಕ:

ನಾಳೆ ರಾಜ್ಯದಲ್ಲಿ ಎರಡನೇ ಮತ್ತು ಅಂತಿಮ ಹಂತದ ಚುನಾವಣೆಯಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಲೋಕಸಭೆ ಕ್ಷೇತ್ರಗಳಲ್ಲಿ 237 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 2ನೇ ಹಂತದಲ್ಲಿ ಕಲಬುರಗಿ, ಶಿವಮೊಗ್ಗ, ಹಾವೇರಿ-ಗದಗ, ಬಳ್ಳಾರಿ , ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಉತ್ತರಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ ಲೋಕಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ. ಇನ್ನು ನಾಳೆ 2.67 ಕೋಟಿ ಮತದಾರರಿಂದ 237 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ……