ಬೆಂಗಳೂರು:
ಆಪರೇಷನ್ ಕಮಲದ ವಿರುದ್ಧ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ರು. ಬಿಜೆಪಿ ನಾಯಕರು, ಕೇಂದ್ರ ಸರ್ಕಾರ ಹಾಗೂ ಯಡಿಯೂರಪ್ಪ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಇತ್ತ ಕಲಬುರಗಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಆಪರೇಷನ್ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಬಿಜೆಪಿಯವರು ಶಾಸಕರನ್ನು ಗಾಳಹಾಕುವ ಮೂಲಕ ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದಾರೆಂದು ಆರೋಪ ಆಕ್ರೋಶ ವ್ಯಕ್ತಪಡಿಸಿದ್ರು. ಹಾಗೂ ರಾಮನಗರದಲ್ಲಿ ಐಜೂರು ವೃತ್ತದ ಬಳಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಬಿಜೆಪಿ ವಿರುದ್ದ ಪ್ರತಿಭಟನೆ ಮಾಡಿದ್ದಾರೆ….