Breaking News

ರೆಸಾರ್ಟ್ ನಲ್ಲಿ ಕೈ ಶಾಸಕರ ಮಾರಾಮಾರಿ..!?

ಆನಂದ್ ಸಿಂಗ್ ಮೇಲೆ ಕಂಪ್ಲಿ ಗಣೇಶ್ ಹಲ್ಲೆ ..

SHARE......LIKE......COMMENT......

ಬೆಂಗಳೂರು:

ನಗರದ ಹೊರವಲಯದ ಬಿಡದಿ ಬಳಿ ಈಗಲ್ಟನ್ ರೆಸಾರ್ಟ್ ನಲ್ಲಿ ಆಪರೇಶನ್ ಕಮಲ ಭೀತಿಯಿಂದ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ಎರಡು ದಿನಗಳ ಹಿಂದೆ ಶಾಸಕಾಂಗ ಪಕ್ಷದ ಸಭೆ ಮುಗಿದ ನಂತರ ನೇರವಾಗಿ ಈಗಲ್ಟನ್ ರೆಸಾರ್ಟ್ ಗೆ ಕರೆದೊಯ್ಯಲಾಗಿತ್ತು. ಕಳೆದ ರಾತ್ರಿ ಬಳ್ಳಾರಿಯ ಶಾಸಕರಾದ ಕಂಪ್ಲಿ ಗಣೇಶ್ ಮತ್ತು ಆನಂದ್ ಸಿಂಗ್ ರಾತ್ರಿಯಿಡೀ ಮದ್ಯ ಸೇವಿಸಿ ನಿದ್ರೆ ಮಾಡದೆ ಮಾತುಕತೆ ನಡೆಸುತ್ತಾ ಕುಳಿತಿದ್ದರು. ಈ ಸಂದರ್ಭದಲ್ಲಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. . ತೀವ್ರವಾಗಿ ಶಾಸಕ ಆನಂದ್ ಸಿಂಗ್ ಗಾಯಗೊಂಡಿದ್ದಾರೆ….ಒಂದು ಹಂತದಲ್ಲಿ ಕಂಪ್ಲಿ ಗಣೇಶ್ ಮದ್ಯದ ಬಾಟಲಿಯಿಂದ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದರಿಂದ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ…

ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಗೆ ತಲೆಗೆ ತೀವ್ರವಾದ ಪೆಟ್ಟಾಗಿದ್ದು, 12 ಹೊಲಿಗೆ ಹಾಕಲಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಪ್ರಾರಂಭದಲ್ಲಿ ಹಲ್ಲೆಯ ವಿಷಯವನ್ನು ಮುಚ್ಚಿಡಲು ಕಾಂಗ್ರೆಸ್ ನಾಯಕರು ಪ್ರಯತ್ನಿಸಿದ್ದರು. ಆದರೆ ಸುದ್ದಿ ಬಹಿರಂಗವಾಗಿದ್ದು 12 ಹೊಲಿಗೆ ಹಾಕಲಾಗಿದೆ ಎಂಬುದು ತಿಳಿದುಬಂದಿದೆ.

ತಲೆಗೆ ಪೆಟ್ಟು ಬಿದ್ದಿರುವ ಆನಂದ್ ತಲೆಗೆ ಸಿಟಿ ಸ್ಕ್ಯಾನ್ ತಪಾಸಣೆ ಮಾಡಲಾಗಿದ್ದು,ಆಸ್ಪತ್ರೆಯ 6ನೇ ಮಹಡಿಯಲ್ಲಿರುವ ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.ಆನಂದ್ ಸಿಂಗ್ ಅವರ ಆಪ್ತರು ಮಾತ್ರ ಜೊತೆಗಿದ್ದು, ಮತ್ತಿನ್ಯಾರನ್ನೂ ಒಳಗೆ ಬಿಡುತ್ತಿಲ್ಲ. ಆಸ್ಪತ್ರೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ…..