ಮುಂಡರಗಿ:
ಬೆಳೆ ವಿಮೆ, ಬೆಳೆ ಹಾನಿ ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ರೈತರು ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಿದರು.
ಪಟ್ಟಣದ ಬೃಂದಾವನ ವೃತ್ತದಿಂದ ಸಾಂಕೇತಿಕ ಪ್ರತಿಭಟನಾ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿದರು. ರೈತ ಹೋರಾಟಗಾರ ವೈ.ಎನ್. ಗೌಡರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದು, ಹೆಸರು, ಗೋವಿನಜೋಳ, ಶೇಂಗಾ, ಸೂರ್ಯಕಾಂತಿ, ಸಜ್ಜಿ, ಎಳ್ಳು, ಮೊದಲಾದ ಬೆಳೆಗಳು ಸಂಪೂರ್ಣ ನಾಶವಾಗಿವೆ ಎಂದರು.
ತಾಲೂಕನ್ನು ಮುಂಗಾರು ಬರಪೀಡಿತ ಪ್ರದೇಶವೆಂದು ಘೊಷಣೆ ಮಾಡಿದೆ. ಆದರೆ ಇದುವರೆಗೂ ರೈತರಿಗೆ ಪರಿಹಾರ ನೀಡಿಲ್ಲ. ಈಗ ಹಿಂಗಾರು ಮಳೆ ಕೈಕೊಟ್ಟಿದೆ. ಆದ್ದರಿಂದ ಮುಂಗಾರು ಮತ್ತು ಹಿಂಗಾರು ಎರಡು ಪರಿಹಾರವನ್ನು 15ದಿನದೊಳಗೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದರು.
ಅಂಗವಿಕಲರು, ವೃದ್ಧರಿಂದ ಮನವಿ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ಮಾಸಾಶನ, ಸಂಧ್ಯಾ ಸುರಕ್ಷಾ ಸೇರಿ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ಮಾಸಾಶನ ದೊರೆಯುತ್ತಿಲ್ಲ. ಐದಾರು ತಿಂಗಳಿಗೊಮ್ಮೆ ವೇತನ ಸಿಗುತ್ತಿದೆ. ಶೀಘ್ರವೇ ಈ ಸಮಸ್ಯೆ ಬಗೆಹರಿಸಬೇಕು ಎಂದು ಮಾನಪ್ಪ ಅರ್ಕಸಾಲಿ, ಎಸ್.ಎಂ. ಹುಳ್ಳಿ, ಮಮ್ಮುಸಾಬ ಕಂಪ್ಲಿಮನಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು…..