ಸಿಡ್ನಿ:
ನಾಯಕ ವಿರಾಟ್ ಕೊಹ್ಲಿ ನಾಯಕತ್ವ ಮತ್ತು ಅವರ ಅದ್ಭುತ ಪ್ರದರ್ಶನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಂಸ್ಥೆ ಕೊಹ್ಲಿಯನ್ನು ತನ್ನ ವರ್ಷದ ಏಕದಿನ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ಆಯ್ಕೆ ಮಾಡಿದೆ.ವರ್ಷಾಂತ್ಯದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಸಂಸ್ಥೆ ತನ್ನ ಕನಸಿನ ವರ್ಷದ ಏಕದಿನ ತಂಡವನ್ನು ಆಯ್ಕೆ ಮಾಡಿದ್ದು ಈ ತಂಡಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ.
ಅಂತೆಯೇ ಕ್ರಿಕೆಟ್ ಆಸ್ಟ್ರೇಲಿಯಾ ತಂಡ ಬಿಡುಗಡೆ ಮಾಡಿರುವ ವರ್ಷದ ಏಕದಿನ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿಯೂ ಸೇರಿದಂತೆ ಒಟ್ಟು ನಾಲ್ಕು ಮಂದಿ ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.ಇನ್ನು 2019ರಲ್ಲಿ ಭಾರತ ತಂಡದ ಏಕದಿನ ಅಭಿಯಾನ ಜನವರಿ 12ರಿಂದ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿದೆ……