Breaking News

ವಿತ್ತ ಮಾಂತ್ರಿಕ ಅರುಣ್ ಜೇಟ್ಲಿ ವಿಧಿವಶ..!

ಟ್ರಬಲ್ ಶೂಟರ್‌ನ್ನು ಕಳೆದುಕೊಂಡ ಮೋದಿ ಸರ್ಕಾರ....

SHARE......LIKE......COMMENT......

ನವದೆಹಲಿ: ಬಿಜೆಪಿಯ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿದ್ದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಜೇಟ್ಲಿ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರುಣ್ ಜೇಟ್ಲಿ ಅವರು ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ ಬಜೆಟ್ ಕೂಡ ಮಂಡನೆ ಮಾಡಿರಲಿಲ್ಲ.ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಮೇ 23ದಂದು ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದರು. ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು…..