ಬೆಂಗಳೂರು:
ದೋಸ್ತಿ ಸರ್ಕಾರದ ವಿರುದ್ಧ ಭಿನ್ನಮತಕ್ಕೆ ಮೊದಲ ವಿಕೆಟ್ ಪತನವಾಗಿದ್ದು, ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ರಾಜಿನಾಮೆ ನೀಡಿದ್ದಾರೆ.ಈ ಹಿಂದೆ ಭಿನ್ನಮತೀಯರ ಗುಂಪಿನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದರು…
ಉಮೇಶ್ ಜಾಧವ್ ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಹಂತದಲ್ಲಿ ಉಮೇಶ್ ಜಾಧವ್ ಅವರ ನಡೆ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ ಉಮೇಶ್ ಜಾಧವ್ ಅವರು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ……