ಬೆಂಗಳೂರು:
ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಕಂಪ್ಲಿ ಶಾಸಕ ಗಣೇಶ್ ಮೇಲೆ ಎಫ್ಐಆರ್ ದಾಖಲಾಗಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಅಗತ್ಯ ಬಿದ್ದರೆ ಗಣೇಶ್ ಅವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸುವ ಪರಿಶೀಲನೆ ನಡೆಯುತ್ತದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಗಣೇಶ್ ಅವರ ಬಂಧನ ವಿಳಂಬವಾಗಿಲ್ಲ. ಅವರನ್ನು ರಕ್ಷಿಸುವ ಯಾವುದೇ ಪ್ರಯತ್ನ ನಡೆದಿಲ್ಲ. ಪೊಲೀಸರು ಅವರ ಕೆಲಸ ಮಾಡುತ್ತಿದ್ದು,ಕಾನೂನಿನಿಗಿಂತ ಯಾರೂ ದೊಡ್ಡವರಲ್ಲ. ಗಣೇಶ್ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ ಎಂದರು…..