Breaking News

ಶಿವಮೊಗ್ಗದಲ್ಲಿ ಸೋತಿದ್ದರೂ ಬಿಎಸ್​ವೈಗೆ ಫೈಟ್​ ಕೊಟ್ಟಿದ್ದೆ..!

ಕುಮಾರಸ್ವಾಮಿ ಅವರು 2 ದೊಡ್ಡ ಸಂಸಾರ ನಡೆಸುತ್ತಿದ್ದಾರೆ ಎಂದ ಮಧು ಬಂಗಾರಪ್ಪ....

SHARE......LIKE......COMMENT......

ಬೆಂಗಳೂರು: 

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ದೇವೇಗೌಡರ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ. ಸಂಸದೀಯ ಕಾರ್ಯದರ್ಶಿ ಅಥವಾ ರಾಜಕೀಯ ಕಾರ್ಯದರ್ಶಿ ಸೇರಿ ಯಾವ ಹುದ್ದೆಯ ಆಕಾಂಕ್ಷಿಯೂ ಅಲ್ಲ.  ಶಿವಮೊಗ್ಗದಲ್ಲಿ ನಾನು ಸೋತಿದ್ದರೂ ಬಿಎಸ್​ವೈಗೆ ಫೈಟ್​ ಕೊಟ್ಟಿದ್ದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಜವಾಬ್ದಾರಿಯನ್ನು ನೀಡಿದರು ನಾನು ವಹಿಸಿಕೊಳ್ಳುತ್ತೇನೆ. ಪಕ್ಷಕ್ಕೆ ಯಾವುದೇ ತ್ಯಾಗ ಮಾಡಲು ನಾವು ಸಿದ್ಧ, ಆದಷ್ಟು ಶೀಘ್ರ ದೇವೇಗೌಡರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.

ಎಚ್​.ಡಿ.ಕುಮಾರಸ್ವಾಮಿ ಅವರು ಸರ್ಕಾರ ಹಾಗೂ ಪಕ್ಷವನ್ನೂ ನಡೆಸಿಕೊಂಡು ಹೋಗುತ್ತಿದ್ದಾರೆ. ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಅವರಿಗೆ ನಾವು ತೊಂದರೆ ಕೊಡುವುದಿಲ್ಲ ಎಂದರು.

ಲೋಕಸಭೆ ಉಪ ಚುನಾವಣೆಯಲ್ಲಿ ವರಿಷ್ಠರ ತೀರ್ಮಾನದಿಂದ ಸ್ಪರ್ಧೆ ಮಾಡಿದ್ದೆ. ಆದರೆ, ಚುನಾವಣೆ ಬಳಿಕ ಪಕ್ಷದ ಚಟುವಟಿಕೆಯಿಂದ ಸ್ವಲ್ಪ ದೂರ ಇದ್ದೆ. ನನಗೆ ಯಾವುದೇ ಅಸಮಾಧಾನವಿಲ್ಲ. ನನಗೆ ಯಾವುದೇ ಸಿಟ್ಟಿಲ್ಲ. ವಿಶ್ವನಾಥ್ ಅವರು ನನ್ನ ಜತೆ ಮಾತನಾಡಿದ್ದಾರೆ ಎಂದು ತಿಳಿಸಿದರು……