ಬೆಂಗಳೂರು :
ಸಂಪುಟ ವಿಸ್ತರಣೆ ಬಳಿಕ ಸಮ್ಮಿಶ್ರ ಸರ್ಕಾರಕ್ಕೆ ಬರಿ ಟೆನ್ಷನ್…ಟೆನ್ಷನ್.. ಯೆಸ್ ಶಾಸಕರ ಬಂಡಾಯದಿಂದ ಕಂಗೆಟ್ಟಿರುವ ಕಾಂಗ್ರೆಸ್, ಮನವೊಲಿಕೆ ಕಸರತ್ತು ಮುಂದುವರಿಸಿದೆ. ಇನ್ನೊಂದೆಡೆ ನೂತನ ಸಚಿವರಿಗೆ ಖಾತೆ ಹಂಚಿಕೆಯ ಕ್ಯಾತೆ ಶುರುವಾಗಿದು ಬುಧವಾರ ಸಂಜೆಯೊಳಗೆ ಅಂತಿಮಗೊಳಿಸಲು ತೀರ್ಮಾನಿಸಿದ್ದಾರೆ…..
ಸತೀಶ್ ಜಾರಕಿಹೊಳಿ ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ಕೆಲ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದ್ದು ಕಾಂಗ್ರೆಸ್ ನಾಯಕರಿಗೆ ಮತ್ತಷ್ಟು ತಲೆನೋವಾಗಿದೆ….
ಮತ್ತೊಂದು ಕಡೆ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದೆ ಇರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. .ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದು, ಲೋಕಸಭಾ ಚುನಾವಣೆಯ ವರೆಗೆ ತಾಳ್ಮೆಯಿಂದಿರುವಂತೆ ಮನವಿ ಮಾಡಿದ್ದಾರೆ.
ಇನ್ನು ರಾಜೀನಾಮೆ ಬೆದರಿಕೆ ಹಾಕಿ ಬೆಂಬಲಿಗರೊಂದಿಗೆ ಚರ್ಚೆಯಲ್ಲಿ ನಿರತರಾಗುವ ಮೂಲಕ ಪಕ್ಷಕ್ಕೆ ಭಾರಿ ಶಾಕ್ ನೀಡಿರುವ ರಮೇಶ್ ಜಾರಕಿ ಹೊಳಿ ಅವರನ್ನು ತಣ್ಣಗಾಗಿಸಲು ಸಹೋದರ, ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ಕಾಂಗ್ರೆಸ್ ನಾಯಕರು ಕಸರತ್ತು ಶುರುಮಾಡಿದ್ದಾರೆ…….