ಚೆನ್ನೈ:
ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ.
ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.