Breaking News

ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅಂತ್ಯ ಸಂಸ್ಕಾರ..

ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿದೆ....

SHARE......LIKE......COMMENT......

ಬೆಂಗಳೂರು:

ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ಗಣ್ಯರು ಅಂತಿಮ‌ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ ಹೇಳಿದ್ದಾರೆ.

ಅನಂತ್ ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಹಾಗೂ ಯಡಿಯೂರಪ್ಪ ಅವರ ಜೊತೆ ಮಾತನಾಡಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.ಪಾರ್ಥೀವ ಶರೀರವನ್ನು ಇಂದು ಇಡೀ ದಿನ ಅವರ ಮನೆಯಲ್ಲಿ ಇಡಲಾಗುವುದು, ನಾಳೆ ಬೆಳಿಗ್ಗೆ 8 ಗಂಟೆಗೆ  ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ಕೊಂಡೊಯ್ದು 9ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನದಲ್ಲಿ ಇಡಲಾಗುವುದು ಎಂದು ಹೇಳಿದ್ದಾರೆ.ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಹಿಂದೂ ರುದ್ರ ಭೂಮಿಯಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಸಲಾಗುವುದು….