ಯಲ್ಲಾಪುರ:
ತಾಂತ್ರಿಕ ವಿಚಾರ ಸಂಕಿರಣಗಳ ಮೂಲಕ ಹೈನುಗಾರಿಕೆ ಕ್ಷೇತ್ರದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಆಗಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭವ್ಯಾ ಶೆಟ್ಟಿ ಹೇಳಿದರು.
ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಸೋಮವಾರ ಜಿ.ಪಂ., ತಾ.ಪಂ ಹಾಗೂ ಪಶುಸಂಗೋಪನಾ ಇಲಾಖೆಯ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪಶುವೈದ್ಯರ ತಾಂತ್ರಿಕ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಅಗತ್ಯಗಳಿಗೆ ಅನುಗುಣವಾಗಿ ಸಮಸ್ಯೆ, ಸವಾಲುಗಳನ್ನು ಎದುರಿಸಲು ವೈದ್ಯರಿಗೆ ತಾಂತ್ರಿಕ ವಿಚಾರ ಸಂಕಿರಣ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಸದಸ್ಯೆ ಶ್ರುತಿ ಹೆಗಡೆ ಮಾತನಾಡಿ, ದೇಸಿ ತಳಿಯ ಗೋವುಗಳು ಕಣ್ಮರೆಯಾಗುತ್ತಿವೆ. ಅವುಗಳ ಸಂರಕ್ಷಣೆಗೆ ಇಲಾಖೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಸೇವೆ ಸವಾಲಾಗಿದ್ದು,ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಡಬೇಕು ಎಂದರು……