Breaking News

ಸರ್ಕಾರವೇ ಮಾಡುತ್ತೆ ಬಡವರ ಮದ್ವೆ..!

ಬಡವರಿಗೆ ಬಂಪರ್ ಗಿಫ್ಟ್....

SHARE......LIKE......COMMENT......

ಬೆಂಗಳೂರು: 

ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಡವರಿಗಾಗಿ ಹೊಸ ಯೋಜನೆ ತರುತ್ತಿದೆ. ಹೊಸ ಸರ್ಕಾರದ ಮೊದಲ ಯೋಜನೆ ಇದಾಗಿದ್ದು, ಮುಂದಿನ ವರ್ಷವೇ ನೂತನ ಯೋಜನೆ ಜಾರಿಗೆ ಬರುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಯಾವುದೇ ಜಾತಿ-ಭೇದವಿಲ್ಲದೆ, ಎಲ್ಲಾ ವರ್ಗದ ಬಡವರಿಗಾಗಿ ಈ ಯೋಜನೆ ಜಾರಿಗೆ ತರಲಾಗುತ್ತಿದ್ದು, ಹಿಂದು ಸಂಪ್ರದಾಯದಂತೆ ವಿವಾಹ ನಡೆಯಲಿದೆ.ಒಂದು ಜೋಡಿಗೆ 25-30 ಸಾವಿರ ಖರ್ಚಾಗಲಿದ್ದು, ಪ್ರತಿ ವರ್ಷ 25-30 ಕೋಟಿ ರೂ. ಈ ಯೋಜನೆಗೆ ಖರ್ಚಾಗಲಿದೆ. ಹಾಗೆಯೇ ವಧು-ವರರಿಗೆ ವಸ್ತ್ರ, ಮಾಂಗಲ್ಯ, ಆರ್ಥಿಕ ಸಹಾಯ ಸರ್ಕಾರವೇ ನೀಡಲಿದೆ. ಚಾಮುಂಡೇಶ್ವರಿ, ಕಟೀಲು ದುರ್ಗೆ, ನಂಜನಗೂಡು ನಂಜುಂಡೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸೇರಿದಂತೆ ಎ ದರ್ಜೆಯ 100 ದೇವಾಲಯಗಳಲ್ಲಿ ಈ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಲಾಗಿದೆ……