Breaking News

ಸಾಲ ಪಾವತಿಗೆ ಕಿರುಕುಳ ಬೇಡ..!

ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಸೂಚನೆ ....

SHARE......LIKE......COMMENT......

ಯಾದಗಿರಿ:

ಬ್ಯಾಂಕ್ ಅಧಿಕಾರಿಗಳು ಸಾಲದ ವಿಚಾರವಾಗಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಅಧಿಕಾರಿಗಳು ರೈತರ ಮೇಲೆ ಒತ್ತಡ ಹಾಕಿ, ಅವರನ್ನು ಬಲಿಪಶು ಮಾಡಕೂಡದು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಸೂಚನೆ ನೀಡಿದರು.

ತಹಸೀಲ್ದಾರ್ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತರೆ ಜಿಲ್ಲೆಗಳಿಗಿಂತ ಯಾದಗಿರಿ ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಸಾರ್ವಜನಿಕರು ಈ  ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೋಬಳಿ ಮಟ್ಟದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನೀಗಿಸಲು ಕೂಡ ಕಂದಾಯ ಅದಾಲತ್ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಒಂದೇ  ಸರ್ವೆ ನಂ ನಲ್ಲಿ 5-6 ಕುಟುಂಬಗಳ ಹೆಸರಿದ್ದಾಗ ಸಮಸ್ಯೆ ಪರಿಹಾರಕ್ಕೆ ರೈತರಿಂದ ಕೂಡ ಸಹಕಾರ ಬೇಕಾಗುತ್ತದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜನಸ್ಪಂದನ ಸಭೆಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವಾಗಿ ಪರಿಹರಿಸಬೇಕು. ನಿಯಮಾನುಸಾರ ಪರಿಹರಿಸಲು ಸಾಧ್ಯವಿಲ್ಲದ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ಹಿಂಬರಹ ನೀಡಿ, ಇತ್ಯರ್ಥಪಡಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು….