Breaking News

ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ಕ್ಲರ್ಕ್..!

ಮೈತ್ರಿ ಸರ್ಕಾರ ವಿರುದ್ಧ ಮೋದಿ ವ್ಯಂಗ್ಯ....

SHARE......LIKE......COMMENT......

ನವದೆಹಲಿ:

ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ‘ಕ್ಲರ್ಕ್’ ಎಂದು ಮೈತ್ರಿ ಸರ್ಕಾರ ವಿರುದ್ಧ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ….ಮೈತ್ರಿ ಸರ್ಕಾರದಲ್ಲಿ ನನಗೆ ಉಸಿರುಗಟ್ಟಿಸುವಂತ ಪರಿಸ್ಥಿತಿ ಇದೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲ, ಕೇವಲ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಮ್ ಲೀಲಾ ಮೈದಾನದಲ್ಲಿ ಬಿಜೆಪಿ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮುಖ್ಯಮಂತ್ರಿಗಳು ತಾವು ಕ್ಲರ್ಕ್ ರೀತಿ ಕೆಲಸ ಮಾಡುತ್ತಿದ್ದೇನೆ ಅಂತ ಬಹಿರಂಗವಾಗಿ ಹೇಳಿಕೊಳ್ಳುವಂತ ಪರಿಸ್ಥಿತಿಯನ್ನು ಕಾಂಗ್ರೆಸ್ ನಿರ್ಮಾಣ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ…..