ಮಂಡ್ಯ:
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎಸ್ಕಾರ್ಟ್ ಕಾರು ಸೇರಿ 5 ಕಾರುಗಳು ಜಖಂಗೊಂಡಿದೆ.
ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಬೆಂಗಾವಲು ವಾಹನದೊಂದಿಗೆ ಸಿದ್ದರಾಮಯ್ಯ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ, ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…..