ತುಮಕೂರು:
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಚೇತರಿಕೆ ಹಿನ್ನೆಲೆಯಲ್ಲಿ ಕಿರಿಯಶ್ರೀ ಬೆಟ್ಟದ ಮೇಲಿರುವ ಸಿದ್ಧಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ..ಸಿದ್ಧಗಂಗಾ ಶ್ರೀಗಳಿಗೆ ಮಠದಲ್ಲೇ ಚಿಕಿತ್ಸೆ ಮುಂದುವರೆದಿದೆ ಮುಂಜಾನೆಯೇ ಸ್ವಾಮೀಜಿಗಳ ರಕ್ತ ಪರಿಶೀಲಿಸಿದ ವೈದ್ಯರು ಶ್ರೀಗಳ ಆರೋಗ್ಯ ಚೇತರಿಸಿದೆ ಎಂದು ತಿಳಿಸಿದ್ದಾರೆ…
ಇನ್ನು ಶೀಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.. ಪರಮಪೂಜ್ಯ ಡಾಕ್ಟರ್ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ…
ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ.
— Narendra Modi (@narendramodi) January 17, 2019