ನವದೆಹಲಿ:
ಸಿಬಿಐ ಬಾಸ್ IS BACK..ಕೇಂದ್ರ ಸರ್ಕಾರಕ್ಕೆ ಮುಖಭಂಗ.. ಯೆಸ್ ಅಲೋಕ್ ವರ್ಮಾಗೆ ಸಿಬಿಐ ನಿರ್ದೇಶಕರಾಗಿ ಮುಂದುವರಿಯಲು ‘ಸುಪ್ರೀಂ’ ಸೂಚನೆ ನೀಡಿದೆ…
ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನಾ ಅವರು ಲಂಚ ಸ್ವೀಕಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪರಸ್ಪರ ಕಿತ್ತಾಡಿಕೊಂಡಿದ್ದರು , ಆಗ ಕೇಂದ್ರ ಸರ್ಕಾರ ಅಲೋಕ್ ವರ್ಮಾಗೆ ಅಧಿಕಾರಕ್ಕೆ ಕತ್ತರಿ ಹಾಕಿ ಕಡ್ಡಾಯ ರಜೆ ಮೇಲೆ ಕಳುಹಿಸಿತ್ತು ಸರ್ಕಾರದ ಈ ಕ್ರಮವನ್ನ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದರು, ಅವರು ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಕಡ್ಡಾಯ ರಜೆ ಮೇಲೆ ಅಲೋಕ್ ವರ್ಮಾವನ್ನು ಕಳುಹಿಸಿರುವ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಹೇಳಿದೆ.
ಅಲೋಕ್ ವರ್ಮಾರನ್ನ ಹುದ್ದೆಯಿಂದ ಕೆಳಗಿಳಿಸುವ ಮುನ್ನ ಸಿಜೆಐ, ಪ್ರಧಾನಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಕೇಂದ್ರ ಚರ್ಚೆ ನಡೆಸಬೇಕಿತ್ತು ಎಂದು ಹೇಳಿರುವ ನ್ಯಾಯಾಲಯ, ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸಿ ಮತ್ತೆ ಸಿಬಿಐ ನಿರ್ದೇಶಕ ಹುದ್ದೆಯಲ್ಲಿ ಮುಂದುವರೆಯುವಂತೆ ಅಲೋಕ್ ವರ್ಮಾ ಅವರಿಗೆ ಸೂಚಿದೆ. ಅಲ್ಲದೆ, ಸದ್ಯಕ್ಕೆ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ…..