Breaking News

ಸುಮಲತಾ, ದರ್ಶನ್, ಯಶ್ ಗೆ ಸಿಆರ್ ಪಿಎಫ್ ಭದ್ರತೆ..!?

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಬಿಜೆಪಿ ಪತ್ರ.....

SHARE......LIKE......COMMENT......

ಬೆಂಗಳೂರು:

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಅವರ ಬೆಂಬಲಕ್ಕೆ ನಿಂತಿರುವ ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ರಾಜ್ಯ ಬಿಜೆಪಿ ಪತ್ರ ಬರೆದಿದೆ.

ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಅವರು . ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದು, ತಮ್ಮ ಮನೆ ಬಳಿ ಗುಪ್ತಚರ ಇಲಾಖೆ ಪೊಲೀಸ್ ಅಧಿಕಾರಿಗಳನ್ನು ಬಿಡಲಾಗಿದೆ. ನಮಗೆ ಭದ್ರತೆ ಬಗ್ಗೆ ಆತಂಕ ಎದುರಾಗಿದೆ ಹಾಗೂ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದ್ದರು.

ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಅವರು, ಸುಮಲತಾ, ಅವರ ಪುತ್ರ ಅಭಿಷೇಕ್, ದರ್ಶನ್ ಹಾಗೂ ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡಬೇಕು ಎಂದು ಮನವಿ ಮಾಡಿ ಕೊಂಡಿದ್ದಾರೆ….