ಹಾಸನ:
ಹಾಸನಾಂಬೆ ದೇವಸ್ಥಾನ ಗರ್ಭಗುಡಿಯಲ್ಲಿನ ವಿದ್ಯಮಾನಗಳನ್ನು ಮಾಧ್ಯಮಗಳು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.
ಸೋಮವಾರ ಸಂಜೆ ಹಾಸನಾಂಬೆ ಜಾತ್ರಾ ಮಹೋತ್ಸವ ಸಿದ್ಧತೆ ಪರಿಶೀಲನೆಗೆ ಬಂದಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್ಗೌಡ ಹಾಗೂ ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜ್ ಈ ಕುರಿತು ಹೇಳಿಕೆ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ಸೂಚನೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಗುರುವಾರ ಮಧ್ಯಾಹ್ನ ತಳವಾರ ವಂಶಸ್ಥ ನಂಜರಾಜ ಅರಸ್ ಬಾಳೆಕಂದು ಕಡಿದ ತಕ್ಷಣ ಹಾಸನಾಂಬೆ ಗರ್ಭಗುಡಿ ಬಾಗಿಲು ತೆರೆಯಲಾಗುತ್ತದೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಬಾಗಿಲು ತೆರೆಯುವ ದೃಶ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದರು. ಆದರೆ, ಈ ವರ್ಷ ಮಾಧ್ಯಮದವರು ತಮ್ಮ ಕ್ಯಾಮರಾ ಜತೆಗೆ ಗರ್ಭಗುಡಿ ಪ್ರವೇಶಿಸುವಂತಿಲ್ಲ ಎಂದರು……