ಬೆಂಗಳೂರು:
ಭಾರತದ ಮಾಜಿ ಪ್ರಧಾನಮಂತ್ರಿಗಳೂ, ಹಾಸನ ಲೋಕಸಭಾ ಸದಸ್ಯರೂ ಆದ ಹೆಚ್.ಡಿ.ದೇವೇಗೌಡರನ್ನು ರಾಜ್ಯ ಸರ್ಕಾರ ಈ ಬಾರಿಯ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ನೇಮಿಸಿದ್ದ ಸಮಿತಿ ಶಿಫಾರಿಸಿನಂತೆ ಈ ಪ್ರಶಸ್ತಿಯನ್ನು ಹೆಚ್.ಡಿ.ದೇವೇಗೌಡ ಅವರಿಗೆ ನೀಡಿ ಗೌರವಿಸಲು ಸರ್ಕಾರ ಮಂಜೂರಾತಿ ನೀಡಿದೆ.
ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಾಲಾರ್ಪಣೆ ಮಾಡಿದ್ರು. ಈ ವೇಳೆ ದೇವೇಗೌಡರಿಗೆ ಸಚಿವ ಪ್ರೀಯಾಂಕ್ ಖರ್ಗೆ ಸಾಥ್ ನೀಡಿದ್ರು. ಇನ್ನು ಮಾಲಾರ್ಪಣೆ ನಂತ್ರ ಮಾಜಿ ಪ್ರಧಾನಿ ದೇವೇಗೌಡರು ಲಂಡನ್ಗೆ ಪ್ರಯಾಣ ಬೆಳೆಸಿದ್ದಾರೆ. ಈ ಮಧ್ಯೆ ಸಿಎಂ ಕುಮಾರಸ್ವಾಮಿ ಅವ್ರು ತಮ್ಮ ತಂದೆ ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಬೇಕಿತ್ತು. ಆದ್ರೆ ಗೌಡರು ಲಂಡನ್ಗೆ ತೆರಳಿದ್ದರಿಂದ ಈ ಅಪೂರ್ವ ಅವಕಾಶ ಕೈತಪ್ಪಿದೆ……