Breaking News

ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ..!

ಸುಲಭ ಬೆಲೆಯಲ್ಲಿ ಗುಣಮಟ್ಟದ ಸೇವೆ....

SHARE......LIKE......COMMENT......

ಶಿರಸಿ:

ಸುಲಭ ಬೆಲೆಯಲ್ಲಿ ಗುಣಮಟ್ಟದ ಸೇವೆ ಸಿಗುವ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವಿಶೇಷ ಅಡಿಪ್ ಯೋಜನೆ ಅಡಿಯಲ್ಲಿ ಅಂಗವಿಕಲರಿಗೆ ಉಚಿತ ಸಾಧನ ಸಲಕರಣೆಗಳನ್ನು ನಗರದಲ್ಲಿ ಸೋಮವಾರ ವಿತರಿಸಿ ಅವರು ಮಾತನಾಡಿದರು. ‘ಅಂಗವಿಕಲರು ಸಮಾಜದಲ್ಲಿ ಒಂದಾಗಿ ಬದುಕಬೇಕು. ಇದುವರೆಗೂ ಅಗತ್ಯವಾದ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಅಂಗವಿಕಲರು ಸರ್ಕಾರಕ್ಕೆ ಅರ್ಜಿ ಸಲ್ಲಿಸುವ ಸಂಪ್ರದಾಯವಿತ್ತು.

ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಈ ವ್ಯವಸ್ಥೆ ಬದಲಿಸಿದೆ. ಅಂಗವಿಕಲರ ಸಮೀಕ್ಷೆ ನಡೆಸಿ, ಅವರಿಗೆ ಬೇಕಾದ ಸಾಮಗ್ರಿಗಳ ಮಾಹಿತಿ ಸಂಗ್ರಹಿಸಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೌಶಲಾಭಿವೃದ್ಧಿ ಇಲಾಖೆ, ಆರೋಗ್ಯ ಸಚಿವಾಲಯದ ಸಹಯೋಗದಲ್ಲಿ ಅಂಗವಿಕಲರು ಜೀವನ ನಿರ್ವಹಣೆ ಉದ್ಯೋಗ ಕಂಡುಕೊಳ್ಳಲು ಕಾರ್ಯಕ್ರಮ ಹಾಕಿಕೊಳ್ಳಲಿದ್ದೇವೆ. ಬೈಕ್ ಪಡೆಯಲು ಆಸಕ್ತ ಅಂಗವಿಕಲರು ಅರ್ಜಿ ಸಲ್ಲಿಸಬೇಕು. ಅವರ ಸಾಮರ್ಥ್ಯ ಆಧರಿಸಿ ಮುಂದಿನ ದಿನಗಳಲ್ಲಿ ನೀಡಲಾಗುವುದು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ,‘ಅಂಗವಿಕಲತೆ ಗುರುತಿಸುವ ನಿಯಮಾವಳಿಗಳಲ್ಲಿ ಬದಲಾವಣೆ ತರಬೇಕಾದ ಅಗತ್ಯತೆ ಇದೆ. ಈಗಿರುವ ನಿಯಮಗಳ ಪ್ರಕಾರ ಶೇ.40ಕ್ಕಿಂತ ಅಧಿಕ ಪ್ರಮಾಣದ ಅಂಗವಿಕಲತೆ ಇದೆ ಎಂದು ಪ್ರಮಾಣಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ಅಂಗವಿಕಲರಲ್ಲಿ ಕೀಳರಿಮೆ ಬರಬಾರದು. ಅವರು ಸಮಾಜದಲ್ಲಿ ತಲೆ ಎತ್ತಿ ಬದುಕುವಂತಾಗಬೇಕು’ ಎಂದರು.

ಅಂಗವಿಕಲರಿಗೆ ಸಲಕರಣೆ ವಿತರಣೆ ಮಾನವೀಯ ಕಾರ್ಯಕ್ರಮವಾಗಿದೆ. ದೇಶದಲ್ಲಿ 1500 ಶಿಬಿರ ನಡೆಸಿ ಸಲಕರಣೆ ವಿತರಿಸಲಾಗಿದ್ದು, ಜನಪ್ರತಿನಿಧಿಗಳು ಪಕ್ಷ ಬೇಧ ಮರೆತು ಪಾಲ್ಗೊಳ್ಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಈ ಮಾದರಿಯ ಕಾರ್ಯಕ್ರಮ ಆಯೋಜಿಸಿ ಸಲಕರಣೆ ನೀಡುತ್ತಿದ್ದೇವೆ.ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿರುವ ಅಂಗವಿಕಲರ ಸಮೀಕ್ಷೆಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳು ನಡೆಸಿದ್ದವು. ಜಿಲ್ಲೆಯಲ್ಲಿ ಗುರುತಿಸಲಾದ 1549 ಅಂಗವಿಕಲರಿಗೆ ಅವರ ಅಗತ್ಯ ವಸ್ತುವನ್ನು ನೀಡಲಾಗುತ್ತಿದೆ. ತ್ರಿಚಕ್ರ ವಾಹನ, ಶ್ರವಣ ಸಾಧನ, ನಡೆಯುವ ಕೋಲು ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ. ಶಿರಸಿ ವಿಭಾಗದಲ್ಲಿ 629 ಜನರಿಗೆ ಸೋಮವಾರ ವಿತರಿಸಲಾಗಿದೆ……