Breaking News

ಪಟಾಕಿ ಅನಾಹುತಕ್ಕೆ ಮಿಂಟೊ ಸಜ್ಜು….

ಅನಾಹುತ ತಡೆಯಲು ದಿನದ 24 ಗಂಟೆ ರೆಡಿ....

SHARE......LIKE......COMMENT......

ಬೆಂಗಳೂರು :

ಈ ಬಾರಿಯ ದೀಪಾವಳಿ ವೇಳೆಯಲ್ಲಿ ಉಂಟಾಗುವ ಪಟಾಕಿ ಅನಾಹುತ ತಡೆಯಲು ಮಿಂಟೊ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ. ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್‌ ಮಾಹಿತಿ ನೀಡಿದರು.

ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು ಸೇವೆ ಒದಗಿಸಲು ವೈದ್ಯರು, ಶುಶ್ರೂಷಕರು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಎಲ್ಲ ವೈದ್ಯ ಹಾಗೂ ವೈದ್ಯೇತರ ಸಿಬ್ಬಂದಿಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಪ್ರತಿ ವರ್ಷ 50ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಹಾನಿ ಮಾಡಿಕೊಂಡು ಮಿಂಟೋಗೆ ಚಿಕಿತ್ಸೆಗೆ ಬರುತ್ತಾರೆ. ಮಹಿಳೆಯರಿಗೆ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡಲಾಗಿದೆ. ಸಹಾಯವಾಣಿ 080-26707176 ಹಾಗೂ ಮೊ. 9481740137 ಕರೆ ಮಾಡಿ ಚಿಕಿತ್ಸೆ ಕುರಿತು ಮಾಹಿತಿ ಪಡೆಯಬಹುದು ಎಂದು ಹೇಳಿದರು…..