Breaking News

ಬೆಳೆ ಸಮೀಕ್ಷೆ ನಿರ್ಲಕ್ಷಿಸಿದರೆ ವಜಾ..!

ಡಿಸಿ ಎಂ.ಕೂರ್ಮಾರಾವ್ ಖಡಕ್ ಎಚ್ಚರಿಕೆ...

SHARE......LIKE......COMMENT......

ಯಾದಗಿರಿ:

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2018-19ರ ಹಿಂಗಾರು ಹಾಗೂ ಬೇಸಿಗೆ ಹಂಗಾಮುಗಳಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅನುಷ್ಠಾನ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಕೇಂದ್ರ ಸರ್ಕಾರ ಮತ್ತು ವಿಮಾ ಕಂಪನಿಗಳಿಗೆ ಬೆಳೆ ಅಂದಾಜು ಸಮೀಕ್ಷೆ ವರದಿ ಬೇಕಿರುತ್ತದೆ. ಆದ್ದರಿಂದ ಸಮೀಕ್ಷೆ

ನಿಖರವಾಗಿ ನಡೆಸಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುನಿಲ್ ಬಿಸ್ವಾಸ್ಗೆ, ಜಿಲ್ಲಾಧಿಕಾರಿ ಸೂಚಿಸಿದರು.
ಹಿಂಗಾರು ಹಾಗೂ ಬೇಸಿಗೆ ಹಂಗಾಮುಗಳಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲು ವಿವಿಧ ಇಲಾಖೆ ಅಧಿಕಾರಿಗಳು ಸಹಕಾರದಿಂದ ಕೆಲಸ ಮಾಡಬೇಕು. ಪ್ರತಿ ಹೋಬಳಿಗೆ 1000 ರೈತರಂತೆ ಬೆಳೆ ವಿಮೆ ನೋಂದಾಯಿಸುವ ನಿಟ್ಟಿನಲ್ಲಿ ರೈತ ಸಂಪರ್ಕ ಕೇಂದ್ರಗಳಿಗೆ ಗುರಿ ನೀಡಬೇಕು. ಇದಕ್ಕಾಗಿ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರಗಳು ಹಾಗೂ ವಿಮಾ ಕಂಪನಿ ಹೆಚ್ಚಿನ ಪ್ರಚಾರ ನೀಡಬೇಕು ಎಂದು ತಿಳಿಸಿದರು.

ಬೆಳೆ ಅಂದಾಜು ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾಗೊಳಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ…….