Breaking News

ಬೇಡಿಕೆಗಳ ಹಿನ್ನೆಲೆ 2 ದಿನಗಳ ರಾಷ್ಟ್ರವ್ಯಾಪಿ ಮುಷ್ಕರ..!

ಪರೀಕ್ಷೆಗಳ ಮುಂದೂಡಿಕೆ, ಹಲವೆಡೆ ಶಾಲಾ-ಕಾಲೇಜಿಗೆ ರಜೆ....

SHARE......LIKE......COMMENT......

ಬೆಂಗಳೂರು: 

ಹಲವು ಬೇಡಿಕೆಗಳ ಈಡೇರಿಕೆ ಹಿನ್ನೆಲೆಯಲ್ಲಿ 2 ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಯನ್ನು ಮುಂದೂಡಿವೆ.

ಬೆಂಗಳೂರು ವಿಶ್ವವಿದ್ಯಾಲಯ ಜ.8 ಮತ್ತು 9 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ಧಾರವಾಡದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮೌಲ್ಯಮಾನ ಕುಲ ಸಚಿವ ಡಾ. ಜಿ.ಬಿ. ಪಾಟೀಲ ಜ. 8 ಮತ್ತು 9 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಜ. 19-21 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ತುಮಕೂರು ವಿಶ್ವವಿದ್ಯಾಲಯ ಜ.8 ರಂದು ನಡೆಯಬೇಕಿದ್ದ ಸ್ನಾತಕೋತ್ತರ ಎಂಬಿಎ., ಎಂಕಾಂ., ಗಣಿತಶಾಸ್ತ್ರ, ರಾಜ್ಯಶಾಸ್ತ್ರ ಮತ್ತು ಸಾರ್ವಜನಿಕ ಆಡಳಿತ ಪದವಿ ಪರೀಕ್ಷೆಗಳನ್ನು ಜ.10 ಕ್ಕೆ ಮುಂದೂಡಿದೆ ಎಂದು ಕುಲಸಚಿವ (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಜ. 8-9ರಂದು ನಡೆಯಬೇಕಿದ್ದ ಬಿ.ಎಡ್​ ಪರೀಕ್ಷೆಗಳನ್ನು ಜ.20-21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಬಂದ್​ ಹಿನ್ನೆಲೆಯಲ್ಲಿ ಜ. 8 ಮತ್ತು 9 ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದೂಡಿದೆ. ದಿ. 10 ರಿಂದ ನಡೆಯಲಿರುವ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಮುಂದೂಡಲಾಗಿರುವ ಪರೀಕ್ಷೆಗಳ ದಿನಾಂಕವನ್ನು ಘೋಷಿಸಲಾಗುವುದು ಎಂದು ಇಲಾಖೆ ಉಪನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ……