Breaking News

ಮಂಡ್ಯದಲ್ಲಿ ಇಂದು ಸುಮಲತಾ ನಾಮಿನೇಷನ್..

ದರ್ಶನ್​​​, ಯಶ್​, ರಾಕ್​​ಲೈನ್​ ಸಾಥ್....

SHARE......LIKE......COMMENT......

ಮಂಡ್ಯ:

ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರೋ ಸುಮಲತಾ ಅಂಬರೀಶ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ನೇರವಾಗಿ ಮಂಡ್ಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸುವರು. ಬಳಿಕ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಿಲ್ವರ್ ಜುಬಿಲಿ ಪಾರ್ಕ್ ಆಗಮಿಸಿ, ಬೃಹತ್ ಬಹಿರಂಗ ಸಭೆ ನಡೆಸುವ ಮೂಲಕ ಅಧಿಕೃತ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಮೆರವಣಿಗೆ ಹಾಗೂ ಪ್ರಚಾರ ಸಭೆಯಲ್ಲಿ ಚಿತ್ರನಟರಾದ ದರ್ಶನ್, ಯಶ್ , ರಾಕ್ ಲೈನ್ ವೆಂಕಟೇಶ್ , ದೊಡ್ಡಣ್ಣ, ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು, ರಾಜಕೀಯ ಮುಖಂಡರು ಅಭಿಮಾನಿಗಳು ಭಾಗವಹಿಸಲಿದ್ದಾರೆ. ಇನ್ನು ಸುಮಲತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಡಿಸಿ ಕಚೇರಿ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ……