Breaking News

ಮನನೊಂದ ಯುವತಿ ಆತ್ಮಹತ್ಯೆ..!

​ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಯುವತಿ....

SHARE......LIKE......COMMENT......

ಚಿಕ್ಕಬಳ್ಳಾಪುರ :
ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಯುವತಿಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.

ನಗರದ ಶಾಂತಿನಗರದ ರಾಜಣ್ಣ ಮತ್ತು ಭಾಗ್ಯಮ್ಮ ದಂಪತಿಯ ಪುತ್ರಿ ಸುಷ್ಮಾ (20) ಮೃತ ಯುವತಿ ಎಂದು ತಿಳಿದು ಬಂದಿದೆ. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಸೋಮವಾರ ಬೆಳಗ್ಗೆ ಯಾರೂ ಇಲ್ಲದ ವೇಳೆ ಮನೆಯ ಮೇಲ್ಛಾವಣಿಯ ಕಬ್ಬಿಣದ ಕೊಂಡಿಗೆ ವೇಲ್​​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಎರಡು ವರ್ಷಗಳಿಂದ ಕ್ಯಾನ್ಸರ್​​ನಿಂದ ನರಳುತ್ತಿದ್ದ ಯುವತಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಳು. ಕ್ಯಾನ್ಸರ್ ಇರುವುದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಯುವತಿಯ ತಂದೆ ರಾಜಣ್ಣ ನೀಡಿರುವ ಹೇಳಿಕೆ ಮೇರೆಗೆ ಚಿಂತಾಮಣಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ……