Breaking News

ಮೋದಿ ಆಡಳಿತದಿಂದ ಜನರ ಬದುಕು ದುರ್ಬಲ..!

ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳ....

SHARE......LIKE......COMMENT......

ಮಂಡ್ಯ:

ಮೋದಿ ಸರ್ಕಾರದಿಂದ ಜನರಿಗೆ ಸಂಕಷ್ಟ ಎದುರಾಗಿದೆ. ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಾಗುತ್ತಿವೆ. ಅಡುಗೆ ಉಪ್ಪು, ಎಣ್ಣೆ, ರಸಗೊಬ್ಬರ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲ ವಸ್ತುಗಳ ಬೆಲೆಗಳು ಹೆಚ್ಚಳವಾಗಿದ್ದು, ಜನರ ಬದುಕು ದುರ್ಬರವಾಗಿದೆ ಎಂದು ಆರೋಪಿಸಿದರು.

ಮೋದಿ ಸರ್ಕಾರ ಜನವಿರೋಧಿ ಆಗಿದ್ದರೂ ಬಿಜೆಪಿ ಸಂಸದರು ತುಟಿ ಬಿಚ್ಚುತ್ತಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಶೋಭಾ ಕರಂದ್ಲಾಜೆ, ಸದಾನಂದಗೌಡ, ಕಟೀಲ್ ಅಡುಗೆ ಸಿಲಿಂಡರ್ ಹೊತ್ತು ಪ್ರತಿಭಟನೆ ನಡೆಸಿದ್ದರು. ಈಗ ಏಕೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂದು ಟೀಕಿಸಿದರು.

ರೈತರ ಆತ್ಮಹತ್ಯೆ ಬಗ್ಗೆ ಸಂಸತ್‌ನಲ್ಲಿ ಇದುವರೆಗೂ ಒಮ್ಮೆಯೂ ಚರ್ಚೆ ನಡೆದಿಲ್ಲ. ಪ್ರಧಾನಿ ಮೋದಿ ಅವರು ರೈತರ ಆತ್ಮಹತ್ಯೆ ಬಗ್ಗೆ ಏಕೆ ಮಾತನಾಡುತ್ತಿಲ್ಲ. ರೈತ ಬೆನ್ನೆಲುಬು ಅಂತಾರೆ, ಯಡಿಯೂರಪ್ಪ ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ ಯಾಕೆ ರೈತರ ಬಗ್ಗೆ ಮಾತನಾಡುತ್ತಿಲ್ಲ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಪ್ರತಿಪಕ್ಷವಾಗಿರುವ ಬಿಜೆಪಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಂಖ್ಯೆ ಹೊಂದಿರುವ ಪ್ರತಿಪಕ್ಷ ಸಂಪೂರ್ಣ ವಿಫಲವಾಗಿದೆ. ಕೇವಲ ಸರ್ಕಾರ ಬೀಳುವುದನ್ನು ಕಾಯುತ್ತಿದೆ ಎಂದು ಟೀಕೆ ಮಾಡಿದರು.

ಗ್ರೀಸ್ ದೇಶದಲ್ಲಿ ನೋಟು ಅಮಾನ್ಯವಾಗಿತ್ತು. ಅದರಿಂದ ಆ ದೇಶ ದಿವಾಳಿಯಾಗಿದೆ. ಇದೆಲ್ಲ ಗೊತ್ತಿದ್ದರೂ ಮೋದಿ ಅವರು ನೋಟು ಅಮಾನ್ಯ ಮಾಡಿದ್ದಾರೆ. ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಯಾವುದೇ ಅನುಕೂಲವಾಗಿಲ್ಲ. ದೊಡ್ಡ ಉದ್ಯಮಿಗಳಿಗೆ ಅನುಕೂಲವಾಗಿದೆ. ಬ್ಯಾಂಕ್‌ಗಳಿಗೆ ಟೋಪಿ ಹಾಕಿರುವವರು ಮೋದಿ ಅವರ ಸ್ನೇಹಿತರೆ. ಮನಮೋಹನ್ ಸಿಂಗ್ ಆರ್‌ಟಿಇ, ಆರ್‌ಟಿಐ ಜಾರಿಗೆ ತಂದರು, ಅಂಥ ಯಾವ ಯೋಜನೆಯನ್ನೂ ಮೋದಿ ತರಲಿಲ್ಲ. ಅಂಥ ಪಕ್ಷಕ್ಕೆ ಅಧಿಕಾರ ನೀಡಬೇಕೆ ಎಂದು ಪ್ರಶ್ನಿಸಿದರು……