Breaking News

ರಾಫೆಲ್ ದಾಖಲೆಗಳು ಕಳ್ಳತನ..!?

ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ.....

SHARE......LIKE......COMMENT......

ನವದೆಹಲಿ:

ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ರಕ್ಷಣಾ ಸಚಿವಾಲಯದಿಂದಲೇ ಕಳ್ಳತನವಾಗಿದೆ . ಮಾಜಿ ಅಥವಾ ಹಾಲಿ ಅಧಿಕಾರಿಗಳೇ ಈ ದಾಖಲೆಗಳನ್ನು ಕದ್ದಿರಬಹುದು, ನಾವೀಗಾಗಲೇ ಈ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಕೇಂದ್ರದ ಅಟಾರ್ನಿ ಜನರಲ್,ಕೆಕೆ ವೇಣುಗೋಪಾಲ್ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದ್ದಾರೆ.

ರಾಫೆಲ್ ಡೀಲ್ ಗೆ ಸಂಬಂಧಿಸಿ ಕಳೆದ ವರ್ಷ ಡಿಸೆಂಬರ್ 14ರಂದು ತಾನು ನೀಡಿದ್ದ ತೀರ್ಪಿನ ಮರುಪರಿಶೀಲನೆಯನ್ನು ನ್ಯಾಯಾಲಯ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಅರ್ಜಿದಾರ ವಕೀಲ ಪ್ರಶಾಂತ್ ಭೂಷಣ ಅವರ ಕೈಯಲ್ಲಿರುವ ರಾಫೆಲ್ ದಾಖಲೆಗಳು ಕೇಂದ್ರ ರಕ್ಷಣಾ ಇಲಾಖೆಯಿಂದ ಕಳವಾದದ್ದು ಎಂದು ಸರ್ಕಾರಿ ವಕೀಲರು ಆರೋಪಿಸಿದ್ದಾರೆ.

ಇವು ರಹಸ್ಯ ದಾಖಲೆಗಳಾಗಿದ್ದು ಇದರಲಿನ ಅಂಶಗಳನ್ನು ದೇಶದ ರಕ್ಷಣಾ ಹಿತದೃಷ್ಟಿಯಿಂದ ಬಹಿರಂಗಪಡಿಸುವಂತಿಲ್ಲ. ಹೀಗಾಗಿ ಈಗ ದಾಖಲೆಗಳು ಪ್ರತಿವಾದಿಗಳ ಕೈಸೇರಿರುವುದು ಅಧಿಕೃತ ರಹಸ್ಯ ಕಾಯಿದೆಯ ಉಲ್ಲಂಘನೆಯಾಗಿದೆ. ಇವುಗಳನ್ನು ಇಲಾಖೆಯಿಂದ ಕದ್ದೊಯ್ಯಲಾಗಿದ್ದು ಈ ಸಂಬಂಧ ತನಿಖೆಯೂ ನಡೆಯುತ್ತಿದೆ ಎಂದು ಸರ್ಕಾರಿ ಪರ ಅಟಾರ್ನಿ ಜನರಲ್ ಹೇಳಿದ್ದಾರೆ.

ರಾಫೆಲ್ ಡೀಲ್ ತೀರ್ಪಿನ ಮರುಪರಿಶೀಲನೆಯನ್ನು ನ್ಯಾಯಾಲಯ ಮಾರ್ಚ್14ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶಿಸಿದೆ…..