Breaking News

ಶೌಚ ಗೃಹ ಬಳಕೆ ಕಡ್ಡಾಯವಾಗಿ ಮಾಡಿ..!

ನಗರಸಭೆ ಸದಸ್ಯೆ ಹೇಮಲತಾ ಪಿ.ಬೂದೆಪ್ಪ ಮನವಿ....

SHARE......LIKE......COMMENT......

ರಾಯಚೂರು:

ಪ್ರತಿಯೊಂದು ಕುಟುಂಬವು ಕಾಪಾಡಬೇಕು ವೈಯಕ್ತಿಕ ಶೌಚಗೃಹ ನಿರ್ಮಿಸಿಕೊಂಡು ಕಡ್ಡಾಯವಾಗಿ ಬಳಸುವಂತಾಗಬೇಕು ಎಂದು ನಗರಸಭೆ ಸದಸ್ಯೆ ಹೇಮಲತಾ ಪಿ.ಬೂದೆಪ್ಪ ಮನವಿ ಮಾಡಿದರು…

ಭಾರತ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಚೇರಿ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಹರಿಜನವಾಡದ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಸ್ವತ್ಛ ಭಾರತ್‌ ಮಿಷನ್‌ (ನಗರ) ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಹಿರ್ದೆಸೆ ಪದ್ಧತಿಯನ್ನು ಸಂಪೂರ್ಣ ನಿಲ್ಲಿಸಬೇಕು. ಕಂಡಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ನಿಲ್ಲಿಸಬೇಕು. ಕೊಳಚೆ ಪ್ರದೇಶಗಳಲ್ಲಿ ಸಾಮೂಹಿಕ ಶೌಚಗೃಹಗಳನ್ನು ನಿರ್ಮಿಸಿದ್ದು, ಅವುಗಳನ್ನು ಬಳಸುವ ಮೂಲಕ ಸ್ವತ್ಛತೆಗೆ ಆದ್ಯತೆ ನೀಡಬೇಕು. ಆ ಮೂಲಕ ನಗರವನ್ನು ಮಾದರಿಯನ್ನಾಗಿಸಬೇಕು ಎಂದರು.

ನಗರಸಭೆ ಪೌರಾಯುಕ್ತ ರಮೇಶ ನಾಯಕ ಮಾತನಾಡಿ, ನಗರದ ಸ್ವತ್ಛತೆಗೆ ಜನರ ಸಹಭಾಗಿತ್ವ ಬಹಳ ಮುಖ್ಯ. ಕಸ ಮತ್ತು ತ್ಯಾಜ್ಯ ವಿಲೇವಾರಿ ಮಾಡುವಾಗಲೇ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು. ಇದರಿಂದ ಗೊಬ್ಬರ ತಯಾರಿಕೆಗೆ ಅನುಕೂಲವಾಗಲಿದೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಎಂ.ಎಸ್‌.ನಟೇಶ ಮಾತನಾಡಿ, ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್‌ ಬಳಕೆ ನಿಯಂತ್ರಣ ಕುರಿತು 2016ರಲ್ಲಿ ಎರಡು ನಿಯಮ ಜಾರಿಗೆ ತರಲಾಗಿದೆ. ಇದು ಕಟ್ಟುನಿಟ್ಟಾಗಿ ಜಾರಿಗೆ ಬರಲು ಜನರಿಗೆ ತಿಳಿವಳಿಕೆ ಮುಖ್ಯ. ನಗರದಲ್ಲಿ ಪ್ರತಿದಿನ 80 ಟನ್‌ ಕಸ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಕೇವಲ 40-45 ಟನ್‌ ಕಸವನ್ನು ಮಾತ್ರ ಸಂಸ್ಕರಿಸಲು ಸಾಧ್ಯವಾಗುತ್ತಿದ್ದು, ಉಳಿದ ತ್ಯಾಜ್ಯ ಹಾಗೆಯೇ ಶೇಖರಣೆಯಾಗುತ್ತಿದೆ. ಇದರಿಂದ ಪರಿಸರಕ್ಕೆ ಗಂಡಾಂತರ ತಪ್ಪದು. ತ್ಯಾಜ್ಯ ಮರುಬಳಕೆಗೆ ಆದ್ಯತೆ ನೀಡಬೇಕಿದೆ ಎಂದರು……