Breaking News

ಸಿದ್ಧಗಂಗಾ ಮಠದಲ್ಲಿ ಸಿದ್ಧಪುರುಷ ಅಜರಾಮರ..

111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ನಡೆದಾಡುವ ದೇವರು....

SHARE......LIKE......COMMENT......

ತುಮಕೂರು: 

ಶತಮಾನದ ಸಂತ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಮಂಗಳವಾರ ಸಿದ್ಧಗಂಗೆ ಮಠದಲ್ಲಿ ಲೀನವಾದರು. ಇಂದು ಸಂಜೆ ಸಿದ್ಧಗಂಗಾ ಮಠದಲ್ಲಿ ಕ್ರಿಯಾ ಸಮಾಧಿ ಸ್ಥಳದಲ್ಲಿ 1ಲಿಂಗಾಯತ ಸಂಪ್ರದಾಯದಂತೆ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಹಾಗೂ ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಲಿಂಗ ಶರೀರದ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇದಕ್ಕು ಮುನ್ನ ಗೋಸಾಲ ಸಿದ್ಧೇಶ್ವರ ವೇದಿಕೆಯಿಂದ ಶ್ರೀಗಳ ಲಿಂಗ ಶರೀರವನ್ನು 6 ಅಡಿ ಎತ್ತರದ ರುದ್ರಾಕ್ಷಿ ರಥದಲ್ಲಿ ಮೆರವಣಿಗೆ ಮೂಲಕ ಕ್ರಿಯಾ ಸಮಾಧಿವರೆಗೆ ತರಲಾಯಿತು. ಮೆರವಣಿಗೆಯಲ್ಲಿ 400ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಸಾವಿರಕ್ಕೂ ಹೆಚ್ಚು ಗಣ್ಯರು ಭಾವಹಿಸಿದ್ದರು. 111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳು ಸೋಮವಾರ ಲಿಂಗೈಕ್ಯರಾಗಿದ್ದಾರೆ…….