ಮುಂಬೈ:
ಕೊರೋನಾ ವೈರಸ್ಗೆ ತತ್ತರಿಸಿರುವ ಮಹಾರಾಷ್ಟ್ರಕ್ಕೆ ಇಂದು ನಿಸರ್ಗ ಚಂಡಮಾರುತ ಬಂದಪ್ಪಳಿಸಲಿದೆ.110 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆ 5:30ಕ್ಕೆ ನಿಸರ್ಗ ಚಂಡಮಾರುತ ತೀವ್ರತೆ ಪಡೆದುಕೊಂಡಿದೆ. ಈ ಸೈಕ್ಲೋನ್ ಗಂಟೆಗೆ 120 ಕಿ.ಮೀ ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗೃತೆ ಕೈಗೊಳ್ಳಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ಕಾರ್ಯಪ್ರವೃತ್ತವಾಗಿದೆ. ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ 40 ಎನ್ಡಿಆರ್ಎಫ್ ತಂಡ ನಿಯೋಜನೆ ಮಾಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಅಂಚಿನಲ್ಲಿರುವ ಕೆಲವರನ್ನು ಸ್ಥಳಾಂತರ ಮಾಡುವ ಬಗ್ಗೆಯೂ ಎನ್ಡಿಆರ್ಎಫ್ ಚಿಂತನೆ ನಡೆಸಿದೆ.ಮುಂಬೈ ಹೊರತಾಗಿ ಪುಣೆ ಭಾಗದಲ್ಲೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ……