ಬೆಂಗಳೂರು:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ ಇಂದು ಒಂದೇ ದಿನ 22 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ ಕಂಡಿದೆ.ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ಜನರಿಗೆ , ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಹರಡಿದೆ…..